ಹಿಮ್ಮುಖವಾಗಿ ಚಲಿಸುತ್ತಿದ್ದ ಪಿಕಪ್ ವಾಹನ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕುಡ ನಿವಾಸಿ, ಸಿದ್ದಕಟ್ಟೆ ಖಾಸಗಿ ಶಾಲೆಯ ಮುಖ್ಯ ಶಿಕ್ಷಕ ಜಾನ್ ಡಿಸೋಜ (53) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೇ 13ರಂದು ಸಿದ್ದಕಟ್ಟೆ ಚರ್ಚ್ ಮೈದಾನದಲ್ಲಿ ನಿಂತಿರುವಾಗ ಹಿಮ್ಮುಖವಾಗಿ ಚಲಿಸಿದ ಪಿಕಪ್ ಜಾನ್ ಅವರಿಗೆ ಢಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…