20ರಂದು ಬೊರಿಮಾರ್ ಚರ್ಚ್ ಗೆ ಆರ್ಚ್ ಬಿಷಪ್ ಭೇಟಿ

125 ವರ್ಷಗಳನ್ನು ಪೂರೈಸಿ ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಬೊರಿಮಾರ್ ಚರ್ಚ್ ಇದೀಗ ಮತ್ತೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಕರ್ನಾಟಕದ ಆರ್ಚ್ ಬಿಷಪ್ ಅತೀ ವಂದನೀಯ ಡಾ| ಪೀಟರ್ ಮಚಾದೊರವರು ಇದೇ ಮೇ 20 ರಂದು ಬೊರಿಮಾರ್ ಚರ್ಚ್ ಗೆ ಭೇಟಿ ನೀಡಿ “ಕಮ್ಯುನಿಯನ್ ಡೇಪವಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಜಾಹೀರಾತು

ಮಕ್ಕಳಾದ ಐಶಲ್ ಮಾರ್ಟಿಸ್, ಲೆನೊರಾ ಸಾನ್ಸಿಯಾ ಪಿಂಟೊ, ನತಾಶ ಮೆಂಡೊನ್ಸಾ, ಒಲಿಶಾ ನೊರೊನ್ಹಾ, ರಿಯೋನ್ ಪಾವ್ಲ್ ಮಾರ್ಟಿಸ್ ಹಾಗೂ ಶರುನ್ ರೊಡ್ರಿಗಸ್ ರವರಿಗೆ ಪ್ರಪ್ರಥಮ ಬಾರಿಗೆ ಪರಮ ಪ್ರಸಾದ ನೀಡಲಿರುವರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಡಾ| ಲಾರೆನ್ಸ್ ಮುಕ್ಕುಝಿ, ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಡಾ| ಗೀ ವರ್ಗೀಸ್ ಮಾರ್ ಮಕಾರಿಯೋಸ್ ಸೇರಿದಂತೆ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್ ಗಳ ಧರ್ಮಗುರುಗಳು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಆರ್ಚ್ ಬಿಷಪ್ ಅತ್ಯಂತ ಮೇಲು ಹುದ್ದೆಯಾಗಿದ್ದು ಇವರು ಚರ್ಚ್ ಗಳಿಗೆ ಭೇಟಿನೀಡುವುದು ತೀರಾ ಅಪರೂಪ. ನಿಟ್ಟಿನಲ್ಲಿ ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ವಿವಿಧ ಹಂತಗಳ ಅನುಷ್ಠಾನದಲ್ಲಿರುವ ಬೊರಿಮಾರ್ ಚರ್ಚ್ ಗೆ ಆರ್ಚ್ ಬಿಷಪ್ ಡಾ| ಮಚಾದೊರವರು ಭೇಟಿ ನೀಡುತ್ತಿರುವುದು ಐತಿಹಾಸಿಕ ದಾಖಲೆ ಮತ್ತು ಮಹತ್ವ ಪಡೆದುಕೊಂಡಿದೆ ಎಂದು ಚರ್ಚ್ ಪ್ರಧಾನ ಧರ್ಮಗುರುಗಳಾದ ವಂದನೀಯ ಗ್ರೆಗರಿ ಪಿರೇರಾ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "20ರಂದು ಬೊರಿಮಾರ್ ಚರ್ಚ್ ಗೆ ಆರ್ಚ್ ಬಿಷಪ್ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*