ಶುಕ್ರವಾರ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರದಲ್ಲಿ ಮೇ 17ರಿಂದ ಮೇ 22ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸರ್ವ ಕಾರ್ಯಕ್ರಮಗಳನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಕಕ್ಯಪದವಿನಲ್ಲಿ ಅತ್ಯಂತ ಸುಂದರವಾದ ಗರಡಿ ನಿರ್ಮಾಣವಾಗಿದೆ. ಶಿಲೆ ಹಾಗೂ ಮರದ ಕೆತ್ತನೆಗಳು ಅದ್ಭುತವಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರವನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡು ಹೋಗುವ ಕೆಲಸ ಇಲ್ಲಿನ ಆಸ್ತಿಕ ಬಂಧುಗಳಾದ್ದಾಗಿದೆ ಎಂದರು.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿ ದೈವ ದೇವಸ್ಥಾನಗಳಲ್ಲಿ ನಿತ್ಯ ಅನುಷ್ಠಾನಗಳಲ್ಲಿ ತೊಡಗಿಸಿಕೊಳ್ಳುವುವುದರಿಂದ ಪುಣ್ಯ ಸಂಚಯವಾಗಿ ಉತ್ತಮ ಜ್ಞಾನ ದೊರೆಯುತ್ತದೆ ಎಂದರು. ಸಮಾಜದ ಉನ್ನತಿಯನ್ನು ಬಯಸಿದ ಕೋಟಿ ಚೆನ್ನಯ್ಯರು ಎಲ್ಲರಿಂದಲೂ ಆರಾಧಿಸಲ್ಪಡುವವರಾಗಿ ನಮಗೆಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.
ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಪ್ರಾಸ್ತವಿಕವಾಗಿ ಮಾತನಾಡಿ ಗ್ರಾಮೀಣನ ಪ್ರದೇಶವಾದ ಕಕ್ಯಪದವಿನಲ್ಲಿ ಎಲ್ಲರ ಸಹಕಾರದಿಂದ ಗರಡಿ ಕ್ಷೇತ್ರವನ್ನು ಪುನರ್ ನಿರ್ಮಾಣಗೊಂಡಿದೆ. ದೈವ ದೇವಸ್ಥಾನಗಳ ಪುನರುತ್ಥಾನಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಪುಣ್ಯ ಕಾರ್ಯವಾಗಿದೆ ಎಂದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಸಂಚಾಲಕರಾದ ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಧ್ಯಕ್ಷ ಬಿ. ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ರತ್ನ ಕುಮಾರ್ ಆರಿಗ ನಾಯಿಲ, ಕಕ್ಯಬೀಡು ದುರ್ಗಾಪರಮೇಶ್ವರೀ ದೇವಸ್ಥಾನದ ಅಧ್ಯಕ್ಷ ಜಾರಪ್ಪ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.
ಸಮಿತಿ ಉಪಾಧ್ಯಕ್ಷ ಕೆ. ಮೋನಪ್ಪ ಪೂಜಾರಿ ಕಂಡೆತ್ಯಾರು ಸ್ವಾಗತಿಸಿದರು, ರಾಜೀವ ಕೆ. ಸನ್ಮಾನ ಪತ್ರ ವಾಚಿಸಿದರು, ಡಾ. ರಾಜರಾಂ ಕೆ.ಬಿ. ವಂದಿಸಿದರು, ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.