ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ವಿಭಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ನಾಲ್ವರು ಗಾಯಗೊಂಡಿದ್ದಾರೆ.
ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಅಪಘಾತ ಶಬ್ದ ಕೇಳಿಸುತ್ತಿದ್ದಂತೆ ತಲಪಾಡಿ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟದಲ್ಲಿದ್ದವರು ಸ್ಥಳಕ್ಕೆ ಓಡಿ, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಿದರು. ರಸ್ತೆಯ ಮಧ್ಯೆ ಪಲ್ಟಿಯಾದ ಕಾರನ್ನು ಸ್ಥಳೀಯರೆಲ್ಲರು ಸೇರಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಮಾಡಿಕೊಟ್ಟಿದ್ದಾರೆ.
ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ತಲಪಾಡಿಯ ಕೆಇಬಿ ಸಮೀಪ ಅಪಾಯಕಾರಿ ತಿರುವು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಢಿಕ್ಕಿಯಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…