ಬಂಟ್ವಾಳ

ಬಿ.ಸಿ. ರೋಡ್ ತಲಪಾಡಿಯಲ್ಲಿ ಕಾರು ಪಲ್ಟಿ, ಸ್ಥಳೀಯರ ನೆರವಿನಿಂದ ಗಾಯಾಳುಗಳು ಆಸ್ಪತ್ರೆಗೆ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ವಿಭಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ನಾಲ್ವರು ಗಾಯಗೊಂಡಿದ್ದಾರೆ.

ಜಾಹೀರಾತು

ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಅಪಘಾತ ಶಬ್ದ ಕೇಳಿಸುತ್ತಿದ್ದಂತೆ ತಲಪಾಡಿ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟದಲ್ಲಿದ್ದವರು ಸ್ಥಳಕ್ಕೆ ಓಡಿ, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಿದರು. ರಸ್ತೆಯ ಮಧ್ಯೆ ಪಲ್ಟಿಯಾದ ಕಾರನ್ನು ಸ್ಥಳೀಯರೆಲ್ಲರು ಸೇರಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಮಾಡಿಕೊಟ್ಟಿದ್ದಾರೆ.

ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ತಲಪಾಡಿಯ ಕೆಇಬಿ ಸಮೀಪ ಅಪಾಯಕಾರಿ ತಿರುವು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಢಿಕ್ಕಿಯಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ