9 AM TREND
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಚುನಾವಣಾ ಆಯೋಗ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ ಗುರುವಾರ ಬೆಳಗ್ಗೆ 9 ಗಂಟೆ ವೇಳೆ 542 ಸ್ಥಾನಗಳ ಪೈಕಿ ಬಿಜೆಪಿ 101 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 40 ಸ್ಥಾನ ಗಳಿಸಿ ಬಿಜೆಪಿಯ ಬೆನ್ನಿಗೇ ಇದೆ.
ಬಹುತೇಕ ಎಲ್ಲ ಕಡೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಮಾಡಲಾಗುತ್ತಿದೆ. 8 ಗಂಟೆಗೆ ಆರಂಭವಾದ ಮತ ಎಣಿಕೆ ಕಾರ್ಯದ ಆರಂಭಿಕ ಹಂತಗಳಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅಂಚೆ ಮತಗಳ ಎಣಿಕೆಯಲ್ಲಿ ಮುನ್ನಡೆ ಪಡೆದಿದ್ದಾರೆ. ಆದರೆ ಚಿತ್ರದುರ್ಗದಲ್ಲಿ ತಾಂತ್ರಿಕ ಕಾರಣಗಳಿಂದ ಮತ ಎಣಿಕೆ ಕಾರ್ಯ ವಿಳಂಬವಾಗಿದೆ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…