ಪದೇ ಪದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಭಾರತ ಸರಕಾರದ ವಿರುದ್ಧ ಕೆಂಡ ಕಾರುತ್ತಿದ್ದ, ಅತ್ಯಂತ ಕಟುವಾದ ಶಬ್ದಗಳಲ್ಲಿ ಟೀಕೆ ಮಾಡುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತು ಅದರ ಅಧಿನಾಯಕಿ, ಮಹಾಘಟಬಂಧನ್ ಮೂಲಕ ಪ್ರಧಾನಮಂತ್ರಿಯಾಗಲು ಕನಸು ಕಾಣುತ್ತಿದ್ದವರ ಪೈಕಿ ಪ್ರಮುಖರಾಗಿದ್ದ ಮಮತಾ ಬ್ಯಾನರ್ಜಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಎದಿರೇಟು ನೀಡುವಲ್ಲಿ ಯಶಸ್ವಿಯಾಗಿದೆ.
2014ರಲ್ಲಿ ಟಿಎಂಸಿ 34 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ಈ ವೇಳೆ ಬಿಜೆಪಿ ಹಾಗೂ ಎಡಪಂಥಿಯರು ತಲಾ 2 ಕ್ಷೇತ್ರ ಹಾಗೂ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಚುನಾವಣೆ ಮತದಾನದ ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಹಿಂಸಾಚಾರ ನಡೆಸಿತ್ತು.
ಪ್ರಧಾನಿ ನರೇಂದ್ರ ಮೋದಿಗೆ ಟಕ್ಕರ್ ಕೊಡುವ ಎದೆಗಾರಿಕೆ ನನಗೆ ಮಾತ್ರ ಇರೋದು ಎಂದು ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳುತ್ತಿದ್ದರು. ಇದೀಗ ಪಶ್ಚಿಮ ಬಂಗಾಳದ 42 ಲೋಕಸಭೆ ಚುನಾವಣಾ ಕ್ಷೇತ್ರಗಳ ಪೈಕಿ 2014ರಲ್ಲಿ ಕೇವಲ 2 ಕ್ಷೇತ್ರವನ್ನು ಮಾತ್ರ ಗೆದ್ದಿದ್ದ ಬಿಜೆಪಿ ಮೋದಿ ಸುನಾಮಿಯಿಂದಾಗಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೂ ಬಿಜೆಪಿ ಪ್ರವೇಶ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
Be the first to comment on "ದೀದಿ ನಾಗಾಲೋಟಕ್ಕೆ ಮೋದಿ ಬ್ರೇಕ್"