ಪದೇ ಪದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಭಾರತ ಸರಕಾರದ ವಿರುದ್ಧ ಕೆಂಡ ಕಾರುತ್ತಿದ್ದ, ಅತ್ಯಂತ ಕಟುವಾದ ಶಬ್ದಗಳಲ್ಲಿ ಟೀಕೆ ಮಾಡುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತು ಅದರ ಅಧಿನಾಯಕಿ, ಮಹಾಘಟಬಂಧನ್ ಮೂಲಕ ಪ್ರಧಾನಮಂತ್ರಿಯಾಗಲು ಕನಸು ಕಾಣುತ್ತಿದ್ದವರ ಪೈಕಿ ಪ್ರಮುಖರಾಗಿದ್ದ ಮಮತಾ ಬ್ಯಾನರ್ಜಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಎದಿರೇಟು ನೀಡುವಲ್ಲಿ  ಯಶಸ್ವಿಯಾಗಿದೆ.

ಜಾಹೀರಾತು

2014ರಲ್ಲಿ ಟಿಎಂಸಿ 34 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ಈ ವೇಳೆ ಬಿಜೆಪಿ ಹಾಗೂ ಎಡಪಂಥಿಯರು ತಲಾ 2 ಕ್ಷೇತ್ರ ಹಾಗೂ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಚುನಾವಣೆ ಮತದಾನದ ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಹಿಂಸಾಚಾರ ನಡೆಸಿತ್ತು.

ಪ್ರಧಾನಿ ನರೇಂದ್ರ ಮೋದಿಗೆ ಟಕ್ಕರ್ ಕೊಡುವ ಎದೆಗಾರಿಕೆ ನನಗೆ ಮಾತ್ರ ಇರೋದು ಎಂದು ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳುತ್ತಿದ್ದರು. ಇದೀಗ ಪಶ್ಚಿಮ ಬಂಗಾಳದ 42 ಲೋಕಸಭೆ ಚುನಾವಣಾ ಕ್ಷೇತ್ರಗಳ ಪೈಕಿ 2014ರಲ್ಲಿ ಕೇವಲ 2 ಕ್ಷೇತ್ರವನ್ನು ಮಾತ್ರ ಗೆದ್ದಿದ್ದ ಬಿಜೆಪಿ ಮೋದಿ ಸುನಾಮಿಯಿಂದಾಗಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 26 ಕ್ಷೇತ್ರಗಳಲ್ಲಿ  ಮುನ್ನಡೆ ಸಾಧಿಸಿದರೂ ಬಿಜೆಪಿ ಪ್ರವೇಶ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts