ನರೇಂದ್ರ ಮೋದಿ ಪ್ರಧಾನಿಯಾಗಿ ಮತ್ತೆ ಅಧಿಕಾರ ಸ್ವೀಕರಿಸಿದ ವಾರದೊಳಗೆ ಕರ್ನಾಟಕದ ಮೈತ್ರಿ ಸರಕಾರ ಪತನಗೊಂಡು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಪಕ್ಷದ ಪ್ರಮುಖ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ವಂಶ ರಾಜಕಾರಣದ ಭೋಗ ಜೀವನಕ್ಕೆ ಅವಕಾಶವಿಲ್ಲ ಎಂಬುದು ಈ ಚುನಾವಣೆಯಲ್ಲಿ ಸಾಭೀತಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ತ್ಯಾಗ ಮತ್ತು ಸಂತ ಜೀವನಕ್ಕೆ ಜನತೆ ಮನ್ನಣೆ ನೀಡಿದ್ದಾರೆ ಎಂದರು.
ಶಾಸಕ ಯು.ರಾಜೇಶ್ ನಾಯ್ಕ್ ಅವರು ಸಂಸದರನ್ನು ಸನ್ಮಾನಿಸಿ ಮಾತನಾಡಿ,ಕಳೆದ ವಿಧಾನಸಭೆ ಚುನಾವಣೆಗಿಂತ ಈ ಚುನಾವಣೆಯಲ್ಲಿ ಬಂಟ್ವಾಳದಿಂದಲು 32 ಸಾವಿರಕ್ಕು ಅಧಿಕ ಮತಗಳಷ್ಟು ಮುನ್ನಡೆ ಸಾಧಿಸಿ ಬಂಟ್ವಾಳ ಕ್ಷೇತ್ರವು ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದೆ ಎಂದರು. ದಿವಂಗತ ಶರತ್ ಮಡಿವಾಳ ಅವರ ತಂದೆ ತನಿಯಪ್ಪಮಡಿವಾಳ ಅವರಿಂದ ಸಂಸದ ನಳಿನ್ ಕುಮಾರ್ ಕಟೀಲ್ ಆರ್ಶೀವಾದ ಪಡೆದುಕೊಂಡರು.
ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್,ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ,ಕ್ಷೇತ್ರ ಸಮಿತಿ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ, ಪಕ್ಷದ ಮುಖಂಡರಾದ ದಿನೇಶ್ ಅಮ್ಟೂರು, ದಿನೇಶ್ ಭಂಡಾರಿ, ಪುರುಷೊತ್ತಮ ಶೆಟ್ಟಿವಾಮದಪದವು, ತಾಪಂ ಸದಸ್ಯ ಪ್ರಭಾಕರ ಪ್ರಭು,ಗಣೇಶ್ ಸುವರ್ಣ, ಮಾಜಿ ಸದಸ್ಯರಾದ ಸೋಮಪ್ಪಕೋಟ್ಯಾನ್, ವಸಂತಕುಮಾರ್ ಅಣ್ಣಳಿಕೆ, ಪ್ರಮುಖರಾದ ವಜ್ರನಾಥ ಕಲ್ಲಡ್ಕ, ಬೊಳ್ಳುಕಲ್ಲು ನಾರಾಯಣ ಪೂಜಾರಿ, ರಂಜಿತ್ ಮೈರ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಸಂತೋಷ್ ಕುಮಾರ್ ಬೆಟ್ಟು, ಹರೀಶ್ ಆಚಾರ್ಯ ಹಾಗೂ ಪುರಸಭಾ ಸದಸ್ಯರು ಉಪಸ್ಥರಿದ್ದರು. ರಾಮದಾಸ್ ಬಂಟ್ವಾಳ ಸ್ವಾಗತಿಸಿ,ವಂದಿಸಿದರು. ಬಳಿಕ ನಳಿನ್ ಪೊಳಲಿ ಕ್ಷೇತ್ರಕ್ಕೆ ತೆರಳಿದರು.