ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲಾ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲು ಅವರು ಶುಕ್ರವಾರ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದರು.
ನಳಿನ್ ಕುಮಾರ್ ಅವರು ಶುಕ್ರವಾರ ಮಧ್ಯಾಹ್ನ ಕೊಕ್ಕಡಕ್ಕೆ ಆಗಮಿಸಿ, ಸೌತಡ್ಕ ದೇವಸ್ಥಾನದಲ್ಲಿಪೂಜೆ ಸಲ್ಲಿಸಿ, ಬಳಿಕ ಅಲ್ಲಿಂದ ಧರ್ಮಸ್ಥಳ, ಕನ್ಯಾಡಿ, ಉಜಿರೆ, ಬೆಳ್ತಂಗಡಿಗೆ ತೆರಳಿದರು. ಶಾಸಕ ಸಂಜೀವ ಮಠಂದೂರು, ಶಾಸಕ ಹರೀಶ ಪೂಂಜ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿಗಳಾದ ಪ್ರಭಾಕರ ಶೆಟ್ಟಿ, ಸೀತಾರಾಮ ಬೆಳಾಲು, ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಇದ್ದರು.
ಧರ್ಮಸ್ಥಳಕ್ಕೆ ಆಗಮಿಸಿದ ಸಂದರ್ಭ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಈ ಸಂದರ್ಭ ನಳಿನ್ ಅವರನ್ನು ಸನ್ಮಾನಿಸಲಾಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ನಳಿನ್"