ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಇದೀಗ ಜಪಾನ್ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಕೌಶಿಕ್ ಬತ್ತನಾಡಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಯುವವಾಹಿನಿ ಬಂಟ್ವಾಳ ಘಟಕ ಅವರನ್ನು ಶುಭ ಹಾರೈಸಿ ಬೀಳ್ಕೊಟ್ಟಿತು.
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಸರಕಾರಿ ಪ್ರೌಡಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರೌಡ ಶಿಕ್ಷಣವನ್ನು ಮುಗಿಸಿದ ಕೌಶಿಕ್, ಕೃಷ್ಣಪ್ಪ ಪೂಜಾರಿ, ಹರಿಣಾಕ್ಷಿ ದಂಪತಿಗಳ ಪುತ್ರ. ಜಪಾನ್ ದೇಶಕ್ಕೆ ತೆರಳುವ ಸಂದರ್ಭ ಯುವವಾಹಿನಿ ಶುಭ ಕೋರಿತು.
ಈ ಸಂದರ್ಭ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್, ಕಾರ್ಯದರ್ಶಿ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ, ರಾಜೇಶ್ ಸುವರ್ಣ, ಲೋಕೇಶ್ ಸುವರ್ಣ ಅಲೆತ್ತೂರು, ಸದಸ್ಯರಾದ ದಿನೇಶ್ ಸುವರ್ಣ ರಾಯಿ, ನಾಗೇಶ್ ನೈಬೇಲು, ಸುಂದರ ಪೂಜಾರಿ ಬೊಳಂಗಡಿ ಬಂಟ್ವಾಳ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ವಿಶ್ವನಾಥ್, ಶಂಭೂರು ಮೂರ್ತೆದಾರರ ಸಹಕಾರಿ ಸಂಘದಅಧ್ಯಕ್ಷ ಪುರುಷೋತ್ತಮ ಪೂಜಾರಿ, ಕೃಷ್ಣಪ್ಪ ಪೂಜಾರಿ, ಪುರುಷೋತ್ತಮ ಪೂಜಾರಿ ಪೆಲತ್ತಿಮಾರ್ ಮತ್ತಿತರರು ಉಪಸ್ಥಿತರಿದ್ದರು.