ಬಂಟ್ವಾಳ

ಬಂಟ್ವಾಳ ಜೈನ್ ಮಿಲನ್ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ

ಬಂಟ್ವಾಳ : 1008 ಭಗವಾನ್ ಶ್ರೀ ಆದಿನಾಥ ಸ್ವಾಮಿ ಜಿನಚೈತ್ಯಾಲಯ ಇದರ ಜಿನಬಿಂಬ ಪ್ರತಿಷ್ಟಾ ಮಹೋತ್ಸವದ 50 ನೇ ವರ್ಧಂತ್ಯೋತ್ಸವದ ಅಂಗವಾಗಿ ಬಂಟ್ವಾಳ ಜೈನ್ ಮಿಲನ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಭಗವಾನ್ ಶ್ರೀ ಆದಿನಾಥ ಸ್ವಾಮಿ ಜಿನ ಚೈತ್ಯಾಲಯದಲ್ಲಿ ಜರಗಿತು.

ಜಾಹೀರಾತು

ಹಸಿಮಸಿ, ವಾಣಿಜ್ಯ ಮುಂತಾದ ೭೨ ಉತ್ತಮ ಕಲೆಗಳ ಪ್ರವರ್ತಕರು, ಆದಿ ಪ್ರವರ್ತಕರಾದ ಭಗವಾನ್ ೧೦೦೮ ಶ್ರೀ ಆದಿನಾಥ ತೀರ್ಥಂಕರರ ಸೇವೆ ಮಾಡುವುದರಿಂದ ಆತ್ಮ ಕಲ್ಯಾಣ ಸಾಧ್ಯ. ಅದರಂತೆ ಶ್ರಾವಕರು ಪಂಚಾಣು ವೃತ ಪಾಲನೆ, ಅನುಯೋಗಗಳ ಅಧ್ಯಯನ ಮತ್ತು ಷಟ್ಕಾರ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜೈನಮಠ ಮೂಡಬಿದ್ರೆ ಜಗದ್ಗುರು ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನವಿತ್ತರು.

ಬಂಟ್ವಾಳ ಬಸದಿ ಹಾಗೂ ಪರಿಸರದ ಬಗ್ಗೆ ತನ್ನ ಬಾಲ್ಯದ ದಿನಗಳ ಬಗ್ಗೆ ತಮ್ಮ ಸವಿನೆನಪನ್ನು ಹಂಚಿಕೊಂಡರು. ಬಂಟ್ವಾಳದ ಶ್ರಾವಕರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಬಸದಿಯ ಕೆಲಸಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ನುಡಿದರು. ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕಗಳನ್ನು ಪಡೆದ  ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ಬಂಟ್ವಾಳ ಇದರ ಅಧ್ಯಕ್ಷ ಡಾ.ಸುದೀಪ್ ಕುಮಾರ್ ಸಿದ್ದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ವಲಯ೮ರ ಉಪಾಧ್ಯಕ್ಷ ಸುದರ್ಶನ್ ಜೈನ್ , ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಜಯರಾಜ್ ಕಂಬಳಿ, ಮಂಗಳೂರು ವಿಭಾಗ ವಲಯ೮ರ ಕಾರ್ಯದರ್ಶಿ ಸುಭಾಸ್ಚಂದ್ರ ಜೈನ್ ಉಪಸ್ಥಿತರಿದ್ದರು.

ದೀಪಕ್ ಕುಮಾರ್ ಇಂದ್ರ ಸ್ವಾಗತಿಸಿದರು. ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ವಂದಿಸಿ ಹರ್ಷರಾಜ್ ಬಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.