ಕಲ್ಲಡ್ಕ

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ: ಬಿಜೆಪಿ ಬೆಂಬಲಿತ ಪ್ರತಿನಿಧಿಗಳ ಆಯ್ಕೆ

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ, ಕಲ್ಲಡ್ಕ ಇದರ ಮುಂದಿನ ವರ್ಷಗಳ ಅವಧಿಗೆ ನಡೆದ  ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 13 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.

ಜಾಹೀರಾತು

ಮೇ.೨೬ರಂದು ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪ್ರೌಢ ಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಕೆ.ಪದ್ಮನಾಭ ಕೊಟ್ಟಾರಿ, ಬಿ.ಸುಧಾಕರ ರೈ, ಗಿರಿಯಪ್ಪ ಗೌಡ, ಪೂವಪ್ಪ ಗೌಡ, ಸುರೇಶ್ ಶೆಟ್ಟಿ, ಮಹಾಬಲ ಸಾಲ್ಯಾನ್ ಆಯ್ಕೆಯಾಗಿರುತ್ತಾರೆ. ಹಿಂದುಳಿದ ಪ್ರವರ್ಗ ಸ್ಥಾನದಿಂದ ಚಂದ್ರಶೇಖರ ಟೈಲರ್ ಮತ್ತು ಲೋಕಾನಂದ, ಮಹಿಳಾ ಮೀಸಲು ಕ್ಷೇತ್ರದಿಂದ ಅರುಣ ಭಟ್ ಮತ್ತು ವಿಜಯ ಆಯ್ಕೆಯಾಗಿರುತ್ತಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ವೆಂಕಟ್ರಾಯ ಪ್ರಭು ರವರು ಚುನಾಯಿತರಾಗಿರುತ್ತಾರೆ. ಪರಿಶಿಷ್ಟ ಜಾತಿ ಕ್ಷೇತ್ರದಿಂದ ಎಂ.ಆರ್.ನೋಣಯ್ಯ ಮತ್ತು ಪರಿಶಿಷ್ಟ ಪಂಗಡ ಸ್ಥಾನದಿಂದ ಕೊರಗಪ್ಪ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಬಿ.ನಾಗೇಂದ್ರ ಚುನಾವಣೆ ನಡೆಸಿಕೊಟ್ಟಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.