ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ವಿಡಿಯೋ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಒತ್ತಾಯಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಜಾಹೀರಾತು
ಈ ಕುರಿತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಶಾಂತಿ, ನೆಮ್ಮದಿ ಕದಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿರುವ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಿಥುನ್ ರೈ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ನಿಂದ ಬಂಟ್ವಾಳ ಠಾಣೆಗೆ ದೂರು"