ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ವಿಡಿಯೋ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಒತ್ತಾಯಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಈ ಕುರಿತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಶಾಂತಿ, ನೆಮ್ಮದಿ ಕದಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿರುವ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)