ಬಂಟ್ವಾಳ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ಮೇ. 23ರಂದು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಪ್ರಸನ್ನ ನೇತೃತ್ವದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ವಿಚಾರಕ್ಕೆ ಸಂಬಂಧಿಸಿ ಹಲವರ ವಿಚಾರಣೆ ನಡೆಯುತ್ತಿದೆ. ನಿಷೇಧಾಜ್ಞೆ ಉಲ್ಲಂಘಿಸಿ, ಗುಂಪು ಸೇರಿ ತನ್ನ ವಿರುದ್ಧ ನಿಂದನೆ, ಜೀವಬೆದರಿಕೆ ಒಡ್ಡಿದ್ದಾಗಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಅವರೂ ದೂರು ನೀಡಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)