ಬಂಟ್ವಾಳ

ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ: ಬಿಜೆಪಿ ಬೆಂಬಲಿತರ ಆಯ್ಕೆ

ಬಂಟ್ವಾಳ: ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ ನಿ , ಪಾಣೆಮಂಗಳೂರು ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 13 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.

ಜಾಹೀರಾತು

ಸಂಘದ ಮುಖ್ಯ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಜಯಶಂಕರ ಬಾಸ್ರಿತ್ತಾಯ ವೆಂಕಟೇಶ್ವರ ಭಟ್ , ಶ್ರೀನಿವಾಸ ಭಟ್ , ಜ್ಞಾನೇಶ್ವರ ಪ್ರಭು , ವಿಜಯ ರೈ , ಪ್ರದೀಪ್ ಶೆಟ್ಟಿ ಆಯ್ಕೆಯಾಗಿರುತ್ತಾರೆ . ಹಿಂದುಳಿದ ಪ್ರವರ್ಗ ‘ ಎ ‘ ಸ್ಥಾನದಿಂದ ಕೇಶವ ಪಿ ಮತ್ತು ಸುರೇಶ್, ಮಹಿಳಾ ಮೀಸಲು ಕ್ಷೇತ್ರದಿಂದ ಮಮತಾ ಮತ್ತು ಮೋಹಿನಿ ಬಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಗಣೇಶ್ ಚುನಾಯಿತರಾಗಿರುತ್ತಾರೆ. ಪರಿಶಿಷ್ಟ ಜಾತಿ ಕ್ಷೇತ್ರದಿಂದ ರತ್ನಾ ಮತ್ತು ಪರಿಶಿಷ್ಟ ಪಂಗಡ ಸ್ಥಾನದಿಂದ ನಾಗಪ್ಪ ನಾಯ್ಕ ಆಯ್ಕೆಯಾಗಿರುತ್ತಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.