ಬಂಟ್ವಾಳ

ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ ಉದ್ಘಾಟನೆ, ಸನ್ಮಾನ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನವನ್ನು ಬಂಟ್ವಾಳ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕಚೈತ್ಯಾನಂದ ಸ್ವಾಮೀಜಿ ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು ಯೋಗದ ಸಾರವನ್ನುತಿಳಿದುಕೊಂಡು ಜೀವನ ಸಾಗಿಸಿದರೆ ನೆಮ್ಮದಿಯನ್ನು ಕಾಣಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉಜಿರೆ ಎಸ್.ಡಿ.ಎಂ ಕಾಲೇಜಿನ ಡಾ.ನಂದೀಶ್ ಯೋಗದ ಮತ್ತು ಜೀವನಶೈಲಿ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಹಿರಿಯ ಯೋಗ ತರಬೇತುದಾರ, ಯೋಗಪಟು ಮಂಗಳೂರಿನ ಮೋನಪ್ಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ 625ರಲ್ಲಿ 624 ಅಂಕ ಗಳಿಸಿದ ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಹೈಸ್ಕೂಲಿನ ವಿದ್ಯಾರ್ಥಿನಿ ಹಾಗೂ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಪುತ್ರಿ ಅನುಪಮಾ ಕಾಮತ್ ಮತ್ತು 611 ಅಂಕ ಗಳಿಸಿದ ಶಂಭೂರು ಬೊಂಡಾಲ ಜಗನ್ನಾಥ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮತ್ತು ಡಾ. ಸುಬ್ರಹ್ಮಣ್ಯ ಮತ್ತು ಪ್ರತಿಭಾ ದಂಪತಿಯ ಪುತ್ರ ಜಯಗೋವಿಂದ ಅವರನ್ನು ಗೌರವಿಸಲಾಯಿತು. ಯೋಗ ಪ್ರಶಿಕ್ಷಣ ಪಡೆದ ಶಿಕ್ಷಕರನ್ನು ಅಭಿನಂದಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಡಾ.ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ರಘುವೀರ ಅವಧಾನಿ ಪ್ರತಿಷ್ಠಾನದ ಕಾರ್ಯಸ್ವರೂಪ ಕುರಿತು ವಿವರಿಸಿದರು. ಕೋಶಾಧಿಕಾರಿ ಡಾ.ಸುಬ್ರಹ್ಮಣ್ಯ ಭ               ಟ್ ವಂದಿಸಿದರು. ಪ್ರತಿಭಾ, ಪ್ರತಿಮಾ ಮತ್ತು ಗೀತಾ ಪ್ರಾರ್ಥಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಬಿ.ಸಿ.ರೋಡಿನ ಮಕ್ಕಳ ತಜ್ಞ ವೈದ್ಯ ಡಾ.ಎಂ.ಎಸ್.ಮಹೇಶ್ ಮತ್ತು ಬಳಗದಿಂದ ಸಂಗೀತ ಕಾರ್ಯಕ್ರಮ, ಯೋಗಪಟುಗಳಿಂದ ಯೋಗನೃತ್ಯ ಪ್ರದರ್ಶನಗೊಂಡಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts