ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಘಟಕದ ವತಿಯಿಂದ ನಿನ್ನನ್ನು ನೀನು ತಿಳಿ ಎಂಬ ವಿಷಯದ ಬಗ್ಗೆ ತರಬೇತಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ರಾತ್ರಿ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ವಲಯ ತರಬೇತುದಾರರಾದ ಡಾ| ರಾಘವೇಂದ್ರ ಹೊಳ್ಳ ತರಬೇತಿ ನಡೆಸಿಕೊಟ್ಟರು ಸರಕಾರಿ ಪ್ರೌಢಶಾಲೆಯಲ್ಲಿ ಕಲಿತು ಇತ್ತೀಚೆಗೆ ನಡೆದ 10 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಜಯಗೋವಿಂದ (611 ಅಂಕ), ಮಾಣಿಲ ಸರಕಾರಿ ಪ್ರೌಢಶಾಲೆಯ ಅನನ್ಯಾ (600 ಅಂಕ), ಹಾಗೂ ಸಾಲೆತ್ತೂರು ಸರಕಾರಿ ಪ್ರೌಢಶಾಲೆಯ ಸೃಷ್ಟಿ ಕೆ.ಕೆ. (600 ಅಂಕ), ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು. ಈ ಸಂದರ್ಭ ಜೇಸಿ ಅಧ್ಯಕ್ಷರಾದ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಜೇಜೇಸಿ ಅಧ್ಯಕ್ಷ ರೋನಿತ್ ಬಿ.ಜೆ. ಮತ್ತಿತರರು ಉಪಸ್ಥಿತರಿದ್ದರು.