ರಂಗಸ್ಥಳದಲ್ಲಿ ಕುಳಿತು ಇಂಪಾಗಿ ಹಾಡುವವರು, ಮದ್ದಳೆ, ಚೆಂಡೆ ನುಡಿಸುವವರು ಇಂದು ಯುನಿಫಾರ್ಮ್ ಹಾಕಿಕೊಂಡು ಕ್ರಿಕೆಟ್ ಆಡುತ್ತಿದ್ದರು. ಇಪ್ಪತ್ತು, ಐವತ್ತು ಸುತ್ತು ಹಾರುತ್ತಿದ್ದವರು ಇಂದು ರನ್ನಿಂಗ್ ರೇಸ್, ಗುಂಡೆಸೆತದಲ್ಲಿ ತಲ್ಲೀನರಾಗಿದ್ದರು.
ಇದು ಮಂಗಳೂರಿನ ಮಂಗಳಾ ಕ್ರೀಡಾಂಗಣ ಮಂಗಳವಾರದ ದೃಶ್ಯ.
ದ.ಕ, ಉಡುಪಿ, ಉ.ಕ. ಕಾಸರಗೋಡಿನ ಹೆಚ್ಚಿನ ಎಲ್ಲ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಮೇಳಗಳ ಯಕ್ಷಗಾನ ಕಲಾವಿದರಿಗೆ ಏರ್ಪಡಿಸಲಾದ ಕ್ರೀಡಾಕೂಟದ ಝಲಕ್ ಇದು.
ಮಂದಾರ್ತಿ ಮೇಳ (ಎ)(ಬಿ), ಸಾಲಿಗ್ರಾಮ, ಕಟೀಲಿನ ೬ ಮೇಳ, ಬಪ್ಪನಾಡು, ಸಸಿಹಿತ್ಲು , ಎಡನೀರು, ಕೂಡ್ಲು, ಮಲ್ಲ, ಕುತ್ಯಾಳ, ಬೆಂಕಿನಾಥೇಶ್ವರ ಮೇಳ, ಸುಂಕದಕಟ್ಟೆ ಮೇಳ, ಸೌಕೂರು, ಅಮೃತೇಶ್ವರಿ ಕೋಟ, ಮಾರಣಕಟ್ಟೆ ಮೇಳ, ಗೋಳಿಗರಡಿ,ಹಿರಿಯಡ್ಕ, ಮಡಾಮಕ್ಕಿ, ಧರ್ಮಸ್ಥಳ ಮೇಳಗಳ ಕಲಾವಿದರು ಓಟ, ಉದ್ದಜಿಗಿತ, ಗುಂಡು ಎಸೆತ, ಬಾಂಬ್ ಇನ್‌ದ ಸಿಟಿ, ಸಂಗೀತ ಕುರ್ಚಿ, ರಿಲೇ, ಕ್ರಿಕೆಟ್, ಹಗ್ಗಜಗ್ಗಾಟ ಮೊದಲಾದ ಆಟಗಳಲ್ಲಿ ಪಾಲ್ಗೊಂಡರು.
ಪಟ್ಲ ಸತೀಶ ಶೆಟ್ಟಿ, ಅರುವ ಕೊರಗಪ್ಪ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ, ಪ್ರಸಾದ ಬಲಿಪ ಹೀಗೆ ಸುಮಾರು ೪೦೦ ಕಲಾವಿದರ ಸಂಗಮ ಅಲ್ಲಿತ್ತು.
ದಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಸುರೇಶ್ ಭಂಡಾರಿ ಕಡಂದಲೆ, ಡಾ.ವಿರಾರ್ ಶಂಕರ್ ಬಿ.ಶೆಟ್ಟಿ, ಉದ್ಯಮಿ ಮನೋಹರ್ ಶೆಟ್ಟಿ, ಲೀಲಾ ಶಂಕರ್ ಶೆಟ್ಟಿ, ಸಂತೋಷ್ ಕುಮಾರ್ ಬೋಳಿಯಾರ್, ಸವಣೂರು ಸೀತಾರಾಮ ಶೆಟ್ಟಿ, ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸದಾನಂದ ಶೆಟ್ಟಿ, ಅಂತಾರಾಷ್ಟ್ರೀಯ ಕ್ರೀಡಾಪಟು ಅನಿಶ್ ಶೆಟ್ಟಿ ಪಟ್ಲ ಗುತ್ತು, ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್, ಧಾರ್ಮಿಕ ಮುಖಂಡ ರವಿಶಂಕರ್ ಶೆಟ್ಟಿ ಬಡಾಜೆ, ದ.ಕ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಒಕೂಟದ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ, ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ, ಉದ್ಯಮಿ ಸಚ್ಚಿದಾನಂದ ಶೆಟ್ಟಿ, ಉದಯ ಪೂಜಾರಿ, ಯಾದವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಯಕ್ಷಧ್ರುವ ಪಟ್ಲಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರೀಶ್ ಎಂ.ಶೆಟ್ಟಿ ಸ್ವಾಗತಿಸಿದರು. ಕೃಷ್ಣ ಶೆಟ್ಟಿ ತಾರೆಮಾರ್ ವಂದಿಸಿದರು. ನಿತೇಶ್ ಶೆಟ್ಟಿ ಕಾರ್‍ಯಕ್ರಮ ನಿರೂಪಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರೂ ಕೆಲ ಕ್ಷಣ ಕ್ರೀಡಾಕೂಟವನ್ನು ವೀಕ್ಷಿಸಿದರು.
for FACEBOOK LIVE click: https://www.facebook.com/100004187764458/videos/1332539590228954/?notif_id=1559047221751040¬if_t=live_video_explicit