ಸರಕು ಸಾಗಾಟ ವಾಹನಗಳಲ್ಲಿ ಕೂಲಿ ಕಾರ್ಮಿಕರು ಮತ್ತು ಇತರ ಪ್ರಯಾಣಿಕರನ್ನು ಸಾಗಿಸುವುದರ ವಿರುದ್ಧ ಬಂಟ್ವಾಳ ಟ್ರಾಫಿಕ್ ಪೊಲೀಸರು ಸುರಕ್ಷತೆಯ ದೃಷ್ಟಿಯಿಂದ ಎಚ್ಚರಿಕೆಯ ಸೂಚನೆಗಳನ್ನು ನೀಡಿದ್ದಾರೆ.
ಇದರಿಂದ ಯಾವುದೇ ಅಪಾಯದ ಸನ್ನಿವೇಶಕ್ಕೆ ಕಾರಣವಾಗಬಾರದು. ಕಟ್ಟಡ ನಿರ್ಮಾಣ ಗುತ್ತಿಗೆದಾರರು ತಮ್ಮ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಲಾರಿಗಳ ಅಥವಾ ಟಿಪ್ಪರ್‌ಗಳಲ್ಲಿ ಸಾಗಾಟ ಮಾಡಬಾರದು. ಲಾರಿಯ ಕ್ಯಾಬಿನ್‌ನಲ್ಲಿ ಕುಳಿತುಕೊಂಡು ಪ್ರಯಾಣಿಸಲು ಅನುಮತಿ ಇರುವ ಸಂಖ್ಯೆಯಷ್ಟೇ ಜನರು ಪ್ರಯಾಣ ಮಾಡಬೇಕು ಎಂದು ಹೆದ್ದಾರಿಯಲ್ಲಿ ಹಾಗೂ ಸರಕು ಸಾಗಾಟ ವಾಹನಗಳಿರುವ ಕೇಂದ್ರಗಳಲ್ಲಿ ಮಾಹಿತಿಗಳನ್ನು ನೀಡಿದರು.
ಕಟ್ಟಡ ನಿರ್ಮಾಣ ಗುತ್ತಿಗೆದಾರರು ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ನಡೆಸುತ್ತಿರುವ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಅಥವಾ ಜನರನ್ನು ಸಾಗಾಟ ಮಾಡುವುದು ಪರವಾನಿಗೆ ನಿಯಮಕ್ಕೆ ವಿರುದ್ಧವಾಗಿದೆ. ಕಾರ್ಮಿಕರನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಟ ಮಾಡಲು ಇತರ ವಾಹನಗಳನ್ನು ಬಳಕೆ ಮಾಡಬೇಕು. ಸರಕು ಸಾಗಾಟ ವಾಹನಗಳಲ್ಲಿ ಜನರನ್ನು ಸಾಗಾಟ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…