ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ವಿಶಿಷ್ಟವಾಗಿ ನಡೆಯಿತು.
ವಿದ್ಯಾರ್ಥಿಗಳನ್ನು ಪೋಷಕರು ಆರತಿ ಬೆಳಗಿ, ಪನ್ನೀರು ಬೆಲ್ಲ, ಹಣೆಗೆ ತಿಲಕ ಇಡುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೊಂಡಾಲ ಜಗನ್ನಾಥ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಇಲಾಖೆಯಿಂದ ಸರಬರಾಜಾದ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು. ಶಿಕ್ಷಕರಾದ ಸದಾಶಿವ ನಾಯಕ್ ಮಾರ್ಗದರ್ಶನ ನೀಡಿದರು. ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿದರು. ಯುವ ಸಂಗಮ ಸೇವಾ ಟ್ರಸ್ಟ್ ಕಾರ್ಯದರ್ಶಿ ಕೇಶವ ನಾಯ್ಕ್, ಶಿಕ್ಷಕರಾದ ಸುಜಾತಾ, ಭಾರತಿ, ಹರಿಪ್ರಸಾದ್, ಪ್ರಕಾಶ್ ಎಂ., ಹರೀಶ್, ಸ್ಥಳೀಯ ಮಹಿಳಾ ಮಂಡಳ ಅಧ್ಯಕ್ಷೆ ಶಾಲಿನಿ ರೆಂಜೆಮಾರ್, ಎಸ್.ಡಿ.ಎಂ.ಸಿ. ಸದಸ್ಯ ಭೋದನಾಥ್ ಪುಜಾರಿ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ ಕಾರ್ಯಕ್ರಮ ನಿರೂಪಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)