ಮಂಗಳೂರಿನ ಹೊರವಲಯದ ಪಚ್ಚನಾಡಿನಲ್ಲಿ ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಆತ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಗುಂಡು ಹಾರಿಸಿ ಬಂಧಿಸಿದ್ದಾರೆ.
ಉಮ್ಮರ್ ಫಾರೂಕ್ ಬಂಧಿತ ಆರೋಪಿ. ಎರಡು ಪ್ರಮುಖ ಪ್ರಕಣದಲ್ಲಿ ಭಾಗಿಯಾಗಿದ್ದ ಉಮ್ಮರ್ನ್ನು ಮಂಗಳವಾರ ತಡರಾತ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ನಟೋರಿಯಸ್ ಟಾರ್ಗೆಟ್ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಹಿಡಿಯಲು ಖಚಿತ ಆಧಾರದ ಮೇಲೆ ಆತನನ್ನ ಬಂಧಿಸಲು ಪೊಲೀಸರು ತೆರಳಿದ್ದಾರೆ. ಈ ವೇಳೆ ಫಾರೂಕ್ ಶಸ್ತ್ರಾಸ್ತ್ರಗಳ ಮೂಲಕ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…