ಮಜಿ ವೀರಕಂಭದಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹೊಸದಾಗಿ ಸೇರ್ಪಡೆಯಾದ ಮಕ್ಕಳನ್ನು ಆರತಿ ಬೆಳಗಿ, ಪನ್ನೀರು ಹೂ ಸಿಂಪಡಿಸಿ ಬರಮಾಡಿಕೊಂಡರು.
ಸಭಾ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸಂಜೀವ ಮೂಲ್ಯ, ಉಪಾಧ್ಯಕ್ಷೆ ವಿಜಯಾ ಸದಸ್ಯ ಪ್ರಸಾದ್ ವೀರಕಂಭ ಇದ್ದರು. ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಶಕುಂತಳಾ, ಸಿಸಿಲಿಯಾ, ಜಯಲಕ್ಷ್ಮೀ, ಹರಿಣಾಕ್ಷಿ, ಶ್ವೇತಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…