ಉಪನ್ಯಾಸಕನ ಮರ್ಡರ್ – ಇಬ್ಬರು ಆರೋಪಿಗಳು ಅರೆಸ್ಟ್

ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗಿನ  ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಕೋಟಿಕಟ್ಟೆ ಎಂಬಲ್ಲಿ ಉಪನ್ಯಾಸಕ ವಿಕ್ರಮ್ ಜೈನ್ (40) ಎಂಬವರನ್ನು ಬರ್ಬರವಾಗಿ ಕಡಿದು ಕೊಂದ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಾಹೀರಾತು

ಆರೋಪಿಗಳಾದ  ಉಜ್ರೆಬೈಲು ಮನೆ, ಮುಂಡೂರು ಗ್ರಾಮದ ನಾಗೇಶ್ ಪೂಜಾರಿ (32), ಪರನೀರು ಮನೆ, ಮುಂಡೂರು ಗ್ರಾಮದ  ಡೀಕಯ್ಯ ನಲ್ಕೆ (39) ಅವರನ್ನು ರೈಲಿನಲ್ಲಿ ಮುಂಬಯಿಗೆ ಪರಾರಿಯಾಗುತ್ತಿರುವ ವೇಳೆ  ಬೈಂದೂರು ರೈಲ್ವೇ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು.

ಇಬ್ಬರಿಗೂ ಆರೋಪಿಯೊಂದಿಗೆ ಬೇರೆ ಬೇರೆ ಕಾರಣಗಳಿಂದ ದ್ವೇಷ ಇತ್ತು. ಸಮಾನವಾದ ಉದ್ದೇಶದಿಂದ ರಾತ್ರಿ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಎಂಬಲ್ಲಿಗೆ ವಿಕ್ರಮ್‌ ಜೈನ್‌  ಅವರನ್ನು  ಬರಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ವಿಕ್ರಮ್‌ ಜೈನ್‌ ರವರು ಸ್ಥಳಕ್ಕೆ ತೆರಳಿದ ಸಂದರ್ಭ, ಸಮಯದಲ್ಲಿ  ಆರೋಪಿಗಳು ಚಾಕು ಹಾಗೂ ತಲವಾರುಗಳಿಂದ ಚುಚ್ಚಿ ಕಡಿದು ಕೊಲೆ ಮಾಡಿರುವುದಾಗಿ ಪೊಲೀಸರು ಪತ್ತೆಹಚ್ಚಿದ್ದು,  ತನಿಖೆ ಮುಂದುವರೆದಿರುತ್ತದೆ.

ಐಟಿಐ ಉಪನ್ಯಾಸಕನ ಮಾರಕಾಸ್ತ್ರಗಳಿಂದ ಇರಿದು ಕೊಲೆ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಉಪನ್ಯಾಸಕನ ಮರ್ಡರ್ – ಇಬ್ಬರು ಆರೋಪಿಗಳು ಅರೆಸ್ಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*