ಪ್ರಧಾನಮಂತ್ರಿಯಾಗಿ ಎರಡನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಸಂಭ್ರಮದಲ್ಲಿ ಮೇ.30ರ ಸಂಜೆ ಇಡೀ ಬಂಟ್ವಾಳ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರಷ್ಟೇ ಅಲ್ಲ, ಮೋದಿ ಅಭಿಮಾನಿಗಳೂ ಸಂಭ್ರಮಾಚರಣೆಯಲ್ಲಿ ತೊಡಗಿದರು.
ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಎದುರಲ್ಲಿ ಸಂಜೆಯಿಂದಲೇ ಬಿಜೆಪಿ ಕಾರ್ಯಕರ್ತರು ಚಹ, ಪಕೋಡಾ ವಿತರಿಸಲು ಆರಂಭಿಸಿದ್ದರು. ದೇವಸ್ಥಾನದ ಸನ್ನಿಧಿಯಲ್ಲಿ ದೇವರನಾಮಗಳನ್ನು ಹಾಡುತ್ತಾ ಭಜನಾ ಸಂಕೀರ್ತನೆ ನಡೆಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪಕ್ಷದ ಹಿರಿಯರಾದ ಜಿ.ಆನಂದ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪಕ್ಷ ಪ್ರಮುಖರಾದ ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ, ರಂಜಿತ್ ಮೈರ, ರಮಾನಾಥ ರಾಯಿ, ಸುದರ್ಶನ ಬಜ ಸಹಿತ ಪುರಸಭೆ ಸದಸ್ಯರು, ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈ ಸಂದರ್ಭ ಉಪಸ್ಥಿತರಿದ್ದರು.
.