ಅಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆ ಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ. ನರಿಕೊಂಬು ಗ್ರಾಮದ ಕಲ್ಲಗ ದರ್ಖಾಸು ನಿವಾಸಿ ಸುಂದರಿ (62) ಮೃತಪಟ್ಟವರು. ಮೇ.24 ರಂದು ಅಪರಾಹ್ನ ಒಲೆಯ ಬೆಂಕಿ ಆಕಸ್ಮಿಕವಾಗಿ ತಾಗಿ ಗಂಬೀರ ಗಾಯಗೊಂಡು ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…