ಪ್ರಮುಖ ಸುದ್ದಿಗಳು

ಮಂಗಳೂರು, ಮೂಡುಬಿದಿರೆ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪುರಸಭೆ, ಮುಲ್ಕಿ ಪಟ್ಟಣ ಪಂಚಾಯತ್ ಹಾಗೂ ಪಡುಪೆರಾರ(ಬಜಪೆ), ತಲಪಾಡಿ ಗ್ರಾಮ ಪಂಚಾಯತ್ ಪ್ರದೇಶಗಳ ಮತ ಎಣಿಕೆ ಪ್ರಕ್ರಿಯೆಯು ಮಂಗಳೂರು ನಗರದಲ್ಲಿ ಮೇ 31 ರಂದು ನಡೆಯಲಿದ್ದು, ಮತ ಎಣಿಕೆ ನಡೆಯುವ  ಹಾಗೂ ವಿಜಯೋತ್ಸವ  ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ನಗರದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇದ್ದು ಸಾರ್ವಜನಿಕರ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ತಾಲೂಕು ಮತ್ತು ಮೂಡಬಿದ್ರೆ ತಾಲೂಕಿನಾದ್ಯಂತ ಮೇ 30 ರಂದು ಮಧ್ಯಾಹ್ನ 2 ಗಂಟೆಯಿಂದ ಮೇ 31 ರಂದು ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮುಕ್ತ ದಿನಗಳೆಂದು ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶಿಸಿರುತ್ತಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ