ಬಂಟ್ವಾಳ

ಮೋದಿ ಪ್ರಧಾನಿ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿಯಿಂದ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ಪ್ರಧಾನಮಂತ್ರಿಯಾಗಿ ಎರಡನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಗುರುವಾರ ರಾತ್ರಿ ಶ್ರೀ ದೇವರಿಗೆ ರಂಗಪೂಜೆ ನೆರವೇರಿತು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪಕ್ಷದ ಹಿರಿಯರಾದ ಸುಲೋಚನಾ ಜಿ.ಕೆ.ಭಟ್, ಜಿ.ಆನಂದ, ಹರಿಕೃಷ್ಣ ಬಂಟ್ವಾಳ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪಕ್ಷ ಪ್ರಮುಖರಾದ ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ, ರಂಜಿತ್ ಮೈರ, ರಮಾನಾಥ ರಾಯಿ, ಸುದರ್ಶನ ಬಜ ಸಹಿತ ಪುರಸಭೆ ಸದಸ್ಯರು, ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈ ಸಂದರ್ಭ ಉಪಸ್ಥಿತರಿದ್ದರು. ರಕ್ತೇಶ್ವರಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಎಲ್. ನಾಯ್ಕ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts