ಸುರಿಬೈಲು ಸರಕಾರಿ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ:  ಸುರಿಬೈಲು ಆಂಗ್ಲ ಮಾಧ್ಯಮ ಶಾಲೆಯನ್ನು ಸ್ಮಾಟ್ ಸ್ಕೂಲ್ ಮಾಡಲು ಈಗಾಗಲೇ ಚಿಂತನೆ ನಡೆಸಲಾಗಿದ್ದು, ಮಕ್ಕಳ ಕಲಿಕೆಯ ಗುಣಮಟ್ಟವನ್ನು ಮತ್ತಷ್ಟು ಪರಿಣಾಮಗೊಳಿಸಲು ಈ ಯೋಜನೆ ಅನುಕೂಲವಾಗಲಿದೆ ಎಂದು ಕೊಳ್ನಾಡು ಗ್ರಾ. ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹೇಳಿದರು.

ಸುರಿಬೈಲು ಸರಕಾರಿ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತಾಡಿದ ಅವರು ಸಮುದಾಯ ಶೈಕ್ಷಣಿಕವಾಗಿ ಜಾಗ್ರತೆಗೊಂಡಾಗ ಮಾತ್ರ ಶಾಲೆಗಳು ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಎಂ.ಎಸ್. ಮಹಮ್ಮದ್ ಉದ್ಘಾಟಿಸಿ ಮಾತನಾಡಿ, ಮಕ್ಕಳನ್ನು ದುಬಾರಿ ವೆಚ್ಚ ವ್ಯಯಿಸಿ ಇಂಗ್ಲಿಷ್ ಶಾಲೆಗೆ ಕಳುಹಿಸುವ ಪೋಷಕರು ಇಂದು ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಅಸಾಧ್ಯವಾಗಿದೆ. ಖಾಸಗಿ ಶಾಲೆಯನ್ನು ಮೀರಿಸುವ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ನಡಿಬೇಕಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಲೇಮಾನ್ ಅಪೋಲೋ, ಶಾಲಾ ಮುಖ್ಯ ಶಿಕ್ಷಕ ಗೋಪಾಲ, ಗ್ರಾ. ಪಂ. ಸದಸ್ಯೆ ಜಯಂತಿ,  ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ.ಕೆ. ಹ್ಯಾರಿಸ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಫಾರೂಕ್ ಬಂಟ್ವಾಳ, ಕೇಂದ್ರದ ಉಪಾಧ್ಯಕ್ಷೆ ಆಸ್ಯಮ್ಮ ಉಪಸ್ಥಿತರಿದ್ದರು.

ಮಕ್ಕಳನ್ನು ಬಲೂನ್, ಪಠ್ಯ ಪುಸ್ತಕ, ನೋಟು ಪುಸ್ತಕ, ಬ್ಯಾಗು ಕೊಟ್ಟು ಸ್ವಾಗತಿಸಲಾಯಿತು.  ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೋಷಕರು ಈ ಸಂದರ್ಭ ಹಾಜರಿದ್ದರು. ಶಾಲಾದತ್ತು ಸಮಿತಿ ಅಧ್ಯಕ್ಷ ಎಸ್. ಎಂ. ಅಬೂಬಕ್ಕರ್ ಸ್ವಾಗತಿಸಿ, ಪ್ರಸ್ತಾವನೆ ಸಲ್ಲಿಸಿದರು. ಶಿಕ್ಷಕಿ ನೀರಜ ವಂದಿಸಿದರು. ದೈಹಿಕ ಶಿಕ್ಷಕ ಶಿವ ಪ್ರಸಾದ್ ಶೆಟ್ಟಿ ನಿರೂಪಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸುರಿಬೈಲು ಸರಕಾರಿ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*