ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ೨೦೧೯-೨೦ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂನ್ ೨ರಂದು ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
೨೦೧೯ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ೯೦ ಕ್ಕಿಂತ ಹೆಚ್ಚು ಅಂಕ ಗಳಿಸಿದ ಶೈಕ್ಷಣಿಕ ಸಾಧಕರನ್ನು ಪುರಸ್ಕರಿಸಲಾಗುವುದು.
ಯುವವಾಹಿನಿ ಸಲಹೆಗಾರ, ತುಳುಲಿಪಿ ಶಿಕ್ಷಕ, ಸಾಹಿತಿ ಬಿ.ತಮ್ಮಯ ಹಾಗೂ ಅಂತಾರಾಷ್ಟ್ರೀಯ ವಿಜ್ಞಾನ ಪ್ರತಿಬೆ ಕೌಶಿಕ್ ಬತ್ತನಾಡಿಇವರನ್ನು ಸನ್ಮಾನಿಸಲಾಗುವುದು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಂ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು, ಬಿ.ಇಂದಿರೇಶ್ ನೇತೃತ್ವದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೊದಿಸಲಿದ್ದಾರೆ. ಆಳ್ವಾಸ್ ಕಾಲೇಜಿನ ಉಪನ್ಯಾಸಕ ಗುಣಪ್ರಸಾದ್ ಕಾರಂದೂರು ಪ್ರಧಾನ ಭಾಷಣ ಮಾಡಲಿದ್ದಾರೆ. ಎಲ್.ಐ.ಸಿ ನಿವೃತ್ತ ಅಸಿಸ್ಟೆಂಟ್ ಜನರಲ್ ಮೆನೇಜರ್ ಚಂದ್ರಕಾಂತ್ ಕುಮಾರ್, ಬಂಟ್ವಾಳ ಪ್ರಾದೇಶಿಕ ಸಾರಿಗೆ ಇಲಾಖಾ ಆಯುಕ್ತರಾದಚರಣ್, ಉದ್ಯಮಿ ಅಜಯ್, ಬಂಟ್ವಾಳ ಎಸ್.ವಿ.ಎಸ್ ವಿದ್ಯಾಗಿರಿ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ಐತಪ್ಪ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಪೂಜಾರಿ ಅಲೆತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಜೂನ್ 2 : ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ"