ಮೂಡುಬಿದಿರೆಯಿಂದ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದ ಖಾಸಗಿ ಮಣ್ಣಿನ ದಿಬ್ಬಕ್ಕೆ ಗುದ್ದಿದ ಪರಿಣಾಮ, 23 ಮಂದಿಗೆ ಗಾಯಗಳಾಗಿವೆ.
ಜಾಹೀರಾತು
ಬಂಟ್ವಾಳ ತಾಲೂಕಿನ ಸೊರ್ನಾಡು ಎಂಬಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಬಸ್ಸಿನಲ್ಲಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಕ್ಕದಲ್ಲಿದ್ದ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದು ವಾಲಿತು. ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳುಂಟಾದವು. ಒಮ್ಮೆಗೆ ಬಸ್ ಗುದ್ದಿದ ಕಾರಣ ಪ್ರಯಾಣಿಕರು ತಮ್ಮ ಮುಂದಿನ ಸೀಟಿಗೆ ಎಸೆಯಲ್ಪಟ್ಟರು. ಈ ಸಂದರ್ಭ 6 ಮಂದಿ ತಲೆಗೆ ಏಟಾಗಿದ್ದು, ಅವರು ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಣ್ಣಿನ ದಿಬ್ಬಕ್ಕೆ ಗುದ್ದಿದ ಬಸ್ – 23 ಮಂದಿಗೆ ಗಾಯ"