ಬಿ.ಸಿ.ರೋಡಿನ ಬಿ.ಮೂಡ ಗ್ರಾಮದ ತಲಪಾಡಿ ಬಳಿ ಗಾಂಜಾ ಮಾರುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಎಸ್.ಐ. ಚಂದ್ರಶೇಖರ್ ನೇತೃತ್ವದಲ್ಲಿ ಜೂನ್. 3ರಂದು ದಾಳಿ ನಡೆದಿದ್ದು ಈ ಸಂದರ್ಭ 40 ಸಾವಿರ ರೂ ಮೌಲ್ಯದ 1.896 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಜಾಹೀರಾತು
ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮಂಚಿ ಕುಕ್ಕಾಜೆಯ ಸಂಶುದ್ದೀನ್ (25) ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ ಆತ ಉಳ್ಳಾಲದ ಮಿಸ್ಬಾ ಎಂಬಾತನಿಂದ ಉಪ್ಪಿನಂಗಡಿಯ ವ್ಯಕ್ತಿಯೊಬ್ಬನ ಮೂಲಕ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸೊತ್ತು ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 8 ಸಿ, 20 ಬಿ ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ಬಳಿ 40 ಸಾವಿರ ರೂ ಮೌಲ್ಯದ ಗಾಂಜಾ ಪತ್ತೆ, ಆರೋಪಿ ಬಂಧನ"