ಬಿ.ಸಿ.ರೋಡಿನ ಬಿ.ಮೂಡ ಗ್ರಾಮದ ತಲಪಾಡಿ ಬಳಿ ಗಾಂಜಾ ಮಾರುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಎಸ್.ಐ. ಚಂದ್ರಶೇಖರ್ ನೇತೃತ್ವದಲ್ಲಿ ಜೂನ್. 3ರಂದು ದಾಳಿ ನಡೆದಿದ್ದು ಈ ಸಂದರ್ಭ 40 ಸಾವಿರ ರೂ ಮೌಲ್ಯದ 1.896 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮಂಚಿ ಕುಕ್ಕಾಜೆಯ ಸಂಶುದ್ದೀನ್ (25) ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ ಆತ ಉಳ್ಳಾಲದ ಮಿಸ್ಬಾ ಎಂಬಾತನಿಂದ ಉಪ್ಪಿನಂಗಡಿಯ ವ್ಯಕ್ತಿಯೊಬ್ಬನ ಮೂಲಕ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸೊತ್ತು ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 8 ಸಿ, 20 ಬಿ ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.