ಬಿ.ಸಿ.ರೋಡಿನ ಸ್ಟೇಟ್ ಬ್ಯಾಂಕ್ ಎದುರು ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೆ ಸಮಸ್ಯೆ ಉಂಟಾಗುವ ವಿಚಾರದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಶಾಸಕ ಯು.ರಾಜೇಶ್ ನಾಯ್ಕ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಪ್ರಯಾಣಿಸಲು ಪ್ರಯಾಣಿಕರು ನಿಲ್ಲುವ ಬಸ್ ಬೇ ಮತ್ತು ಬಿ.ಸಿ.ರೋಡಿನ ಕೃಷಿಯುತ್ಪನ್ನ ಸಹಕಾರಿ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಕಟ್ಟಡದ ಮುಂಭಾಗ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ಅವರೊಂದಿಗೆ ಪರಿಶಿಲನೆ ನಡೆಸಿದ ಶಾಸಕರು, ಬಳಿಕ ಸ್ಥಳಕ್ಕೆ ಪುರಸಭಾ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಅವರನ್ನು ಕರೆಸಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನೀರು ನಿಲ್ಲದಂತೆ ಕಾಂಕ್ರೀಟ್ ಹಾಕಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಮೇಬಲ್ ಡಿ.ಸೋಜ, ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್, ಬಂಟ್ವಾಳ ನಗರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಟ್ರಾಫಿಕ್ ಎಸ್.ಐ.ಮಂಜುನಾಥ್ ಹಾಗೂ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಗೋವಿಂದ ಪ್ರಭು ಮತ್ತಿತರರು ಉಪಸ್ಥಿತರಿದ್ದರು. ಈ ಕುರಿತು ಟೂರಿಸ್ಟ್ ಕಾರು, ವ್ಯಾನು ಚಾಲಕರ ಸಂಘದವರು ಪ್ರತಿಭಟನೆಯನ್ನು ಶನಿವಾರ ನಡೆಸಿದ್ದರು.
(more…)