ಬಂಟ್ವಾಳ

ದೇವಸ್ಥಾನ ಹಿಂಬದಿ ಔಷಧೀಯ ಸಸ್ಯ ನೆಟ್ಟು ಪರಿಸರ ದಿನಾಚರಣೆ

ಮಾಲಿನ್ಯ ತಡೆಗಟ್ಟುವುದಷ್ಟೇ ಅಲ್ಲ, ಔಷಧೀಯ ಸಸ್ಯಗಳನ್ನು ನೆಡುವುದರ ಮೂಲಕ ಆರೋಗ್ಯ ಜಾಗೃತಿಯನ್ನೂ ನಡೆಸುವ ಹಿನ್ನೆಲೆಯಲ್ಲಿ ಜೋಡುಮಾರ್ಗ ನೇತ್ರಾವತಿ ಜೇಸಿ ವತಿಯಿಂದ ಜೂನ್.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದ ಹಿಂಬದಿ ನಡೆಸಲಾಯಿತು.

ಜಾಹೀರಾತು

ಜನರಲ್ಲಿ ಮರ ಗಿಡಗಳನ್ನು ಬೆಳೆಸುವದರ ಬಗ್ಗೆ ಜಾಗೃತಿ ಮತ್ತು ಜಾಗತಿಕ ತಾಪಮಾನ, ಮಾಲಿನ್ಯ ತಡೆಗಟ್ಟಲು ಪರಿಸರ ದಿನಾಚರಣೆಯನ್ನು ಆಚರಿಸುವುದು ಒಂದು ಉತ್ತಮ ಮಾರ್ಗಹಸಿರು ಉಳಿಸಿ ಬೆಳೆಸುವುದರ ಮೂಲಕ ನಾವು ನಮ್ಮ ಮುಂದಿನ ಪೀಳಿಗೆಯವರು ಒಂದು ಉತ್ತಮ ವಾತಾವರಣದಲ್ಲಿ ಬದುಕಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಕಾರ್ಯಕ್ರಮವನ್ನು ಗಿಡ ನೆಟ್ಟು ಉದ್ಘಾಟಿಸಿದ ಎಸ್. ವಿ.ಎಸ್. ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು.

ಈ ಸಂದರ್ಭ ಮಾವು, ಚಿಕ್ಕು, ಬಿಲ್ವಪತ್ರೆ ಗಿಡಗಳನ್ನು ನೆಟ್ಟು ಅದಕ್ಕೆ ನೀರೆಯಲಾಯಿತು. ಕಾಟಾಚಾರಕ್ಕೆ ಗಿಡನೆಡುವುದರ ಬದಲು ಅವುಗಳನ್ನು ಪೋಷಿಸಿ ಬೆಳೆಸಿ ಅವುಗಳಿಗೆ ಪ್ರತೀ ವರ್ಷ ಹುಟ್ಟು ಹಬ್ಬ ಆಚರಿಸುವುದರ ಮೂಲಕ ಪರಿಸರ ಕಾಳಜಿ ತೋರಿಸಿ ಇತರರಿಗೆ ಮಾದರಿಯಾಗಬೇಕೆಂದು ಸಂದರ್ಭದಲ್ಲಿ ಉಪಸ್ಥಿತರಿದ್ದ ಜೇಸಿ ಘಟಕದ ಪೂರ್ವಾಧ್ಯಕ್ಷ ರಾಮಚಂದ್ರ ರಾವ್ ತಿಳಿಸಿದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ, ಜೇಸಿ ಅಧ್ಯಕ್ಷ ಹರ್ಷರಾಜ್ ಸಿ, ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಉಪಾಧ್ಯಕ್ಷರಾದ ಜಯರಾಜ್ ಬಂಗೇರ, ಧೀರಜ್ ಹೆಚ್, ನಿರ್ದೇಶಕರಾದ ಸುಧಾಕರ್ ವೈ, ಖಜಾಂಚಿ ಹರಿಶ್ಚಂದ್ರ ಆಳ್ವ, ಸದಸ್ಯರುಗಳಾದ ಶ್ರೀನಿಧಿ ಭಟ್, ಕೃಷ್ಣರಾಜ್ ರಾವ್, ಸುಬ್ರಹ್ಮಣ್ಯ ರಾವ್, ಜೇಜೇಸಿಗಳಾದ ವರುಣ್ ರಾಜ್, ಆದಿತ್ಯ, ತನಿಷ್ಕಾ ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts