ಮಳೆಗಾಲದಲ್ಲಿ ಸಮಸ್ಯೆಗಳುಂಟಾಗದಂತೆ ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ತಾಪಂ ಅಧ್ಯಕ್ಷ ಸೂಚನೆ

ಮಳೆಗಾಲ ಆರಂಭಗೊಳ್ಳುವ ಸಂದರ್ಭ ಜನರಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಕಾರ್ಯನಿರ್ವಹಿಸಿ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಹೀರಾತು

ತಾ.ಪಂ.ಮಾಸಿಕ ಅಧಿಕಾರಿಗಳ ಸಭೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಗುರುವಾರ ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲ ಆರಂಭವಾಗುವುದರಿಂದ ತಾಲೂಕು ಮಟ್ಟದ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸುವ ಮನಸ್ಸು ಮಾಡಿ ಎಂದರು.

ತಾ.ಪಂ.ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಮಾತನಾಡಿ  ತಾ.ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಮಾಸಿಕ ಸಭೆಯಲ್ಲಿ ಭಾಗವಹಿಸಿ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಕೆಲಸ ಮಾಡುವಂತೆ ತಿಳಿಸಿದರು.

ಮಳೆಗಾಲ ಆರಂಭದಲ್ಲಿ ರಸ್ತೆ ಮತ್ತು  ಸುರಕ್ಷತಾ ದೃಷ್ಟಿಯಿಂದ ಚರಂಡಿ ಹಾಗೂ ಇನ್ನೂ  ಬೇಕಾದ ವ್ಯವಸ್ಥೆ ಗಳನ್ನು ಮಾಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗೆ ಇ.ಒ.ರಾಜಣ್ಣ ಸೂಚನೆ ನೀಡಿದರು.

12 ರಸ್ತೆ , 28 ಶಾಲಾ ಸಂಪರ್ಕ ಸೇತು ಯೋಜನೆ ಹಾಗೂ 6 ಪಿ.ಯು.ಕಾಲೇಜು ಕಟ್ಟಡಗಳು ಮಂಜೂರಾತಿ ಪಡೆದು ಟೆಂಡರ್ ಹಂತದಲ್ಲಿದೆ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮಾಹಿತಿ ನೀಡಿದರು.

ಸರ್ವರ್ ಸಮಸ್ಯೆ ಯಿಂದ ಅಹಾರ ಶಾಖೆಯ ಕೆಲಸಕ್ಕೆ ಸ್ವಲ್ಪ ಮಟ್ಟಿಗೆ ತೊಂದರೆ ಯಾಗುತ್ತಿದೆ ಎಂದು ಅಹಾರ ಶಾಖಾ ಇಲಾಖೆಯ ಅಧಿಕಾರಿ ಸಭೆಯ ಗಮನಕ್ಕೆ ತಂದರು.

ಅಂಗನವಾಡಿ ಶಾಲಾ ಕಟ್ಟಡಗಳಿಗೆ ಹೊಸ ರೂಪು ನೀಡಿ‌ಮಕ್ಕಳ ಸಂಖ್ಯೆ ಹೆಚ್ಚಳ ವಾಗುವಂತೆ ಸಿ.ಡಿ.ಪಿ.ಒ.ಇಲಾಖಾ ಅಧಿಕಾರಿಗಳು ಯೋಜನೆ ರೂಪಿಸಿ ಎಂದು ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ತಿಳಿಸಿದರು.

ಅಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವದಿಂದಾಗಿ ಅಂಗನವಾಡಿಗಳನ್ನು ಉಳಿಸಿಕೊಳ್ಳಲು ಸರಕಾರಿ ಶಾಲೆಗಳ ಜೊತೆಯಲ್ಲಿ ಸೇರಿಕೊಂಡು ಮುನ್ನಡೆ ಯುವುದು ಉತ್ತಮ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ತಿಳಿಸಿದರು.

ದುರಸ್ತಿ ಯಲ್ಲಿರುವ ಅಂಗನವಾಡಿ ಗಳನ್ನು ಪಟ್ಟಿ ಮಾಡಿ ಅಂತಹ ಅಂಗನವಾಡಿ ಕೇಂದ್ರಗಳ ರಿಪೇರಿ ಮಾಡುವ ಯೋಜನೆ ಕೈಬಿಟ್ಟು ನೂತನ ಕಟ್ಟಡ ನಿರ್ಮಾಣ ಮಾಡುವ ಯೋಚನೆ ಮಾಡುವ, ಪ್ರತಿ ವರ್ಷ ಹಂಚಿನ ಮಾಡು ಇರುವ ಅಂಗನವಾಡಿಗಳ ದುರಸ್ತಿ ಕಾರ್ಯಕ್ಕೆ ಹಣ ಖರ್ಚಾಗುತ್ತದೆ, ಅ ನಿಟ್ಟಿನಲ್ಲಿ ಅನಾವಶ್ಯಕ ಪ್ರತಿ ವರ್ಷ ರಿಪೇರಿ ಗೆ ಖರ್ಚಾಗುವ ಹಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನೂತನ ಕಟ್ಟಡ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಇಒ ತಿಳಿಸಿದರು. ಗ್ರಾ.ಪಂ.ನಿಂದ ಯಾವುದೇ ರೀತಿಯಲ್ಲಿ ದೂರು ಬಾರದ ರೀತಿಯಲ್ಲಿ ಮೆಸ್ಕಾಂ ಕಾರ್ಯನಿರ್ವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಇ.ಒ.ರಾಜಣ್ಣ ತಿಳಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಳೆಗಾಲದಲ್ಲಿ ಸಮಸ್ಯೆಗಳುಂಟಾಗದಂತೆ ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ತಾಪಂ ಅಧ್ಯಕ್ಷ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*