ವಾಮದಪದವು

ಸಿದ್ಧಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

ಸಿದ್ಧಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ತರಕಾರಿ ಬೀಜಗಳನ್ನು ವಿತರಿಸುವ ಮೂಲಕ ಗುರುವಾರ ಪರಿಸರ ದಿನವನ್ನು ಆಚರಿಸಲಾಯಿತು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ, ಪಲ್ಗುಣಿ ಇಕೋ ಕ್ಲಬ್ ಮತ್ತು ಇಂಟರ್‍ಯಾಕ್ಟ್ ಕ್ಲಬ್  ವತಿಯಿಂದ ನಡೆದ ಕಾರ್ಯಕ್ರಮದ ಅಧ್ಯಕತೆಯನ್ನು ಸಂಗಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಹಲಸಿನ ಗಿಡವನ್ನು ಶಾಲಾ ವೈಸ್ ಪ್ರಿನ್ಸಿಪಾಲ್ ರಮಾನಂದ ನೂಜಿಪ್ಪಾಡಿಯವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರೋಟರಿ ಕ್ಲಬ್ ಬಂಟ್ವಾಳ ಇದರ ನಿಯೋಜಿತ ಅಧ್ಯಕ್ಷೆ ಶಿವಾನಿ ಬಾಳಿಗಾ ನಿಯೋಜಿತ ಕಾರ್ಯದರ್ಶಿ ಸ್ಮಿತಾ ಉಪಸ್ಥಿತರಿದ್ದು, ಶಾಲೆಯ ಮಕ್ಕಳಿಗೆ ತರಕಾರಿ ಬೀಜಗಳನ್ನು ವಿತರಿಸಿದರು.

ಈ ಸಂದರ್ಭ ಮಾತನಾಡಿದ ವೈಸ್ ಪ್ರಿನ್ಸಿಪಾಲ್ ರಮಾನಂದ, ಕಳೆದ ವರ್ಷ ವಿದ್ಯಾರ್ಥಿಗಳಿಗೆ ತರಕಾರಿ ಬೀಜಗಳನ್ನು ವಿತರಿಸಿದ ಫಲವಾಗಿ ಸುಮಾರು 120 ಮಕ್ಕಳು ಮನೆಗಳಲ್ಲಿ ತರಕಾರಿ ಬೆಳೆದಿದ್ದು, ಕೃಷಿಯ ಮಾಹಿತಿ ಹಾಗೂ ಪರಿಸರ ಉಳಿಸಿ, ಗಿಡಮರಗಳನ್ನು ಬೆಳೆಸುವ ಕುರಿತು ಪ್ರಾಯೋಗಿಕವಾಗಿ ತಿಳಿದುಕೊಂಡಿದ್ದಾರೆ. ಈ ಬಾರಿಯೂ ಆ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಲಿದ್ದಾರೆ ಎಂದರು. ಬಳಿಕ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸ್ಮಿತಾ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts