ಸರಕಾರಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಎದುರಿನಿಂದ ಬಂದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ.
ಬೆಳ್ತಂಗಡಿ ನಿವಾಸಿಗಳಾದ ಶಶಿಧರ್ (29) ಮತ್ತು ಅವರ ಸಂಬಂಧಿ ಮೋಹಿತಾ (28) ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂದರ್ಭ ಅದೇ ದಾರಿಯಲ್ಲಿ ಸಾಗುತ್ತಿದ್ದ ಬೆಳ್ತಂಗಡಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ಕಾರಿನ ಚಾಲಕ ನೌಶಾದ್ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಸಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಸ್ ಆಕ್ಟಿವಾ ಡಿಕ್ಕಿ, ಇಬ್ಬರಿಗೆ ಗಾಯ"