ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಟಿಪ್ಪುನಗರ ಗುರುಪುರ ನದಿ ದಂಡೆಯಲ್ಲಿ ಶುಕ್ರವಾರ ಪತ್ತೆಯಾಗಿದೆ.
35 – 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು ಕೊಳೆತುಹೋದ ಸ್ಥಿತಿಯಲ್ಲಿದೆ, ಮೃತದೇಹದ ಹೊಟ್ಟೆಗೆ ಚಾಕುವಿನಿಂದ ಇರಿದು, ಕೈಗಳನ್ನು ಬಟ್ಟೆಯಲ್ಲಿ ಕಟ್ಟಲಾಗಿದ್ದು ಕುತ್ತಿಗೆ ಬಿಗಿದ ಸ್ಥಿತಿಯಲ್ಲಿದ್ದು, 3-4 ದಿನಗಳ ಹಿಂದೆ ಕೊಲೆಗೈದು ನದಿಗೆ ಎಸೆದಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬಜ್ಪೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೊಲೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆ"