ಸ್ವಚ್ಛಮೇವ ಜಯತೇ ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ ಮಿಷನ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಆಯೋಜನೆಯಲ್ಲಿ ಸ್ವಚ್ಛಮೇವ ಜಯತೇ ಎಂಬ ಜನಾಂದೋಲನ ಕಾರ್ಯಕ್ರಮಕ್ಕೆ ಬಾಳ್ತಿಲ ಗ್ರಾಪಂ ವಠಾರದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿಯಾನಕ್ಕೆ ಚಾಲನೆ ನೀಡಿ, ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಬಳಿಕ ಮಾತನಾಡಿದ ಅವರು, ನಗರ ಪ್ರದೇಶಗಳಂತೆ ಗ್ರಾಮೀಣ ಪ್ರದೇಶಗಳಲ್ಲೂ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ಈ ಅಭಿಯಾನಕ್ಕೆ ಎಲ್ಲ ಅಧಿಕಾರಿಗಳು ನೇತೃತ್ವ ವಹಿಸಿ ಗ್ರಾಮೀಣರಿಗೆ ಈ ವಿಚಾರ ತಲುಪುವಂತೆ ಮನದಟ್ಟು ಮಾಡಬೇಕು ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸದಸ್ಯರಾದ ಲಕ್ಷ್ಮೀ ಗೋಪಾಲ ಅಚಾರ್ಯ, ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ ರಾಜಣ್ಣ, ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ, ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ಉಪಸ್ಥಿತರಿದ್ದರು. ಮೋಹನ್ ಪಿ.ಎಸ್. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸ್ವಚ್ಛಮೇವ ಜಯತೇ ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*