ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಇರಾ ಗ್ರಾಮ ಪಂಚಾಯತ್ ಗಳ ಆಶ್ರಯದಲ್ಲಿ ಗುರುವಾರ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮೊಹಮ್ಮದ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷರಾದ ರಾಮ ಕೆ., ಉಪ ತಹಶಿಲ್ದಾರ್ ರವಿಶಂಕರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಧಾಕರ್ ಕೆ.ಟಿ.,ತುಳಸಿ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಕಂದಾಯ ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…