ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ವಿದ್ಯಾರ್ಥಿಗಳ ಪಾತ್ರ ಹಿರಿದಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಆಗತ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾರ್ಗದರ್ಶನ ಮಾಡಿದರು.
ವಿದ್ಯಾರ್ಥಿ ದೆಸೆಯಲ್ಲಿ ನಮ್ಮ ಕರ್ತವ್ಯವನ್ನು, ಆದ್ಯತೆಯನ್ನು ತಿಳಿದುಕೊಂಡರೆ ಭವಿಷ್ಯದಲ್ಲಿ ಅತ್ಯುನ್ನತ ಸಾಧನೆ ಮಾಡಬಹುದು ಎಂದು ಹೆಬ್ರಿಯ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಅಮರೇಶ್ ಹೆಗ್ಡೆ ತಿಳಿಸಿದರು.
ಮೈಸೂರು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಭರತ್ ಕುಮಾರ್, ಸೌಮ್ಯಶ್ರೀ, ಧಾರವಾಡ ಗ್ರಾಮಾಂತರ ಶಾಸಕರಾದ ಅಮೃತ್ ದೇಸಾಯಿ, ಸೈಂಟ್ ಜೋಸೆಫ್ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಹರೀಶ್ ಐತಾಳ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಾಯಾಜಿ, ಸಂಚಾಲಕರಾದ ವಸಂತ್ ಮಾಧವ, ಡಾ. ಕಮಲಾ ಪ್ರಭಾಕರ್ ಭಟ್ ಕಲ್ಲಡ್ಕ, ನಾಗೇಶ್ ಕಲ್ಲಡ್ಕ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ಉಪಸ್ಥಿತರಿದ್ದರು.
ಪ್ರಥಮ ಪಿಯುಸಿಗೆ ದಾಖಲಾದ ನೂತನ ವಿದ್ಯಾರ್ಥಿಗಳು ಯಜ್ಞಕ್ಕೆ ಹವಿಸ್ಸನ್ನು ಅರ್ಪಿಸಿ, ಭಾರತಮಾತೆಗೆ ಪುಷ್ಪಾರ್ಚನೆಗೈದು, ಹಿರಿಯರಿಂದ ತಿಲಕಧಾರಣೆ ಹಾಗೂ ಆರ್ಶೀವಾದ ಪಡೆದರು.
ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ವಸಂತ ಬಲ್ಲಾಳ್ ಸ್ವಾಗತಿಸಿದರು. ಯತಿಕಾ ವಂದಿಸಿದರು. ಅನುಪಮ ಕಾರ್ಯಕ್ರಮ ನಿರೂಪಿಸಿದರು.