ನಿರಂತರ ಅಭ್ಯಾಸದಿಂದ ಸಾಧಕರಾಗಬಹುದು: ಡಾ. ಪಾಂಡುರಂಗ ನಾಯಕ್

ಪ್ರತಿ ವಿದ್ಯಾರ್ಥಿ ನಿರಂತರ ಅಭ್ಯಾಸ ಮಾಡಬೇಕು ಎಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಪಾಂಡುರಂಗ ನಾಯಕ್ ಹೇಳಿದರು.

ಜಾಹೀರಾತು

ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಎನ್ನುವುದು ಭವಿಷ್ಯಕ್ಕೆ ರಹದಾರಿ ಇದ್ದಂತೆ. ಈ ಘಟ್ಟದಲ್ಲಿನ ನಮ್ಮ ನಡವಳಿಕೆ ನಮ್ಮ ಮುಂದಿನ ಜೀವನವನ್ನು ನಿರ್ಣಯಿಸಬಲ್ಲದು. ಇಂದಿನ ಸಾಧನೆ ಮುಂದಿನ ಬದುಕಿಗೆ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳಾದವರು ಜೀವನದಲ್ಲಿ ಶಿಸ್ತು ನಯ ವಿನಯಗಳನ್ನು ರೂಢಿಸಿಕೊಳ್ಳಬೇಕು. ಅದರಂತೆ ನಿರಂತರ ಜ್ಞಾನಾರ್ಜನೆಯ ಕಡೆ ಗಮನ ನೀಡಬೇಕು. ಇಲ್ಲಿ ಕಲಿತ ವಿದ್ಯಾರ್ಥಿಗಳು ನಿರಂತರ ರ್‍ಯಾಂಕ್ ಗಳಿಸಿರುತ್ತಾರೆ. ಇಂದು ದೇಶ ವಿದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅದಕ್ಕೆ ಅವರ ಸಾಧನೆಯ ಕಾರಣ. ವಿದ್ಯಾರ್ಥಿಗಳಾದವರು ಆಧುನಿಕ ತಂತ್ರಜ್ಞಾನವನ್ನು ದುರುಪಯೋಗವಾಗದಂತೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರೊನಾಲ್ಡ್ ಡಿ ಸೋಜ ಮಾತನಾಡಿ ಹೆತ್ತವರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾಲೇಜಿನ ಆಧಾರಸ್ತಂಭಗಳು, ಅಧ್ಯಾಪಕರನ್ನು ವಿದ್ಯಾರ್ಥಿಗಳು ಯಾವತ್ತೂ ಗೌರವಿಸಬೇಕು ಅದುವೇ ಅವರ ಸಾಧನೆ ಮತ್ತು ಪ್ರತಿಫಲಕ್ಕೆ ಶ್ರೀರಕ್ಷೆ ಎಂದರು.

ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಡಾ. ಎಚ್ ಆರ್ ಸುಜಾತ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ ನಾರಾಯಣ ಭಂಡಾರಿ ವಂದಿಸಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶಶಿಕಲಾ ಎಂ ಪಿ, ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿ ರಚಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಶಿವಣ್ಣ ಪ್ರಭು ಕೆ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಕಾವ್ಯ ದಿವ್ಯಶ್ರೀ ಮತ್ತು ಪೂಜಾ ಪ್ರಾರ್ಥಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಿರಂತರ ಅಭ್ಯಾಸದಿಂದ ಸಾಧಕರಾಗಬಹುದು: ಡಾ. ಪಾಂಡುರಂಗ ನಾಯಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*