ಕಲ್ಲಡ್ಕ

ರಸ್ತೆ ಬಿಟ್ಟು ಚರಂಡಿಗೆ ಇಳಿದ ಬಸ್

ಎದುರಿನಿಂದ ಓವರ್ ಟೇಕ್ ಮಾಡಿ ಬರುತ್ತಿದ್ದ ಟ್ಯಾಂಕರ್‌ಗೆ ದಾರಿಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಸರಕಾರಿ ಬಸ್ಸೊಂದು ರಸ್ತೆ ಬದಿಯ ಚರಂಡಿಗಿಳಿದ ವಾಲಿನಿಂತ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಬುಧವಾರ ನಡೆದಿದೆ.

ಜಾಹೀರಾತು

ಘಟನೆಯಿಂದ ಬಸ್‌ನಿರ್ವಾಹಕನೋರ್ವ ಗಾಯಗೊಂಡಿದ್ದು, ಪ್ರಯಾಣಿಕರೆಲ್ಲರು ಅಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಅಳಿರ ಎಂಬಲ್ಲಿ ಎದುರಿನಿಂದ ಟ್ಯಾಂಕರ್ ಲಾರಿಯು ಓವರ್ ಟೇಕ್ ಮಾಡಿಕೊಂಡು ಬಂದಿದೆ. ಈ ವೇಳೆ ಬಸ್ ಚಾಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಲು ರಸ್ತೆ ಬದಿಗೆ ಸರಿಸಿದಾಗ, ನಿಯಂತ್ರಣ ತಪ್ಪಿದ ಬಸ್ ಚರಂಡಿಗಿಳಿದಿದೆ. ಘಟನೆಯಿಂದ ಬಸ್ ನಿರ್ವಾಹಕನಿಗೆ ಗಾಯವಾಗಿದ್ದು, ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನಲ್ಲಿ ೪೦ಕ್ಕಿಂತಲೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು, ತುರ್ತು ನಿರ್ಗಮನದ ಬಾಗಿಲಿನ ಮೂಲಕ ಹೊರ ಬಂದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಎಸ್ಸೈ ಯಲ್ಲಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts