ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಮನೆಯೊಳಗೆ ಪತ್ತೆಯಾದ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ನಡೆದಿದ್ದು ಬುಧವಾರ ಸಂಜೆ ಬೆಳಕಿಗೆ ಬಂದಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಹಾಗೂ ವಿಮಲ(65) ಮೃತ ದಂಪತಿ.
ಪತಿ ಹಾಗು ಪತ್ನಿ ಇಬ್ಬರು ಮಾತ್ರ ಮನೆಯಲ್ಲಿ ವಾಸಿಸುತ್ತಿದ್ದರು. ಇಬ್ಬರ ಶವ ಸಂಪೂರ್ಣ ಕೊಳೆದಿದೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಉಳ್ಳಾಲ ಇನ್ಸ್ ಪೆಕ್ಟರ್ ಗೋಪಿಕೃಷ್ಣ,ಪಿಎಸ್ ಐ ಗುರುವಪ್ಪ ಕಾಂತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿದ್ದ ದಂಪತಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…