ಕಲ್ಲಡ್ಕ

ಭಾನುವಾರ ಬೊರಿಮಾರ್ ಚರ್ಚ್ ಗೆ ಶಿವಮೊಗ್ಗ ಬಿಷಪ್ ಭೇಟಿ

ಭಾನುವಾರ ಅಂದರೆ ಜೂನ್ 23ರಂದು ಬಂಟ್ವಾಳ ತಾಲೂಕಿನ ಬೊರಿಮಾರ್ ಚರ್ಚ್ ಗೆ ಶಿವಮೊಗ್ಗ ಬಿಷಪ್ ಭೇಟಿ ನೀಡಲಿದ್ದಾರೆ.

ಜಾಹೀರಾತು

ಬಂಟ್ವಾಳ: ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಬೊರಿಮಾರ್ ಚರ್ಚ್ ಗೆ ಶಿವಮೊಗ್ಗದ ಬಿಷಪ್ ಅತೀ ವಂದನೀಯ ಡಾ. ಫ್ರಾನ್ಸಿಸ್ ಸೆರಾವೋ ಭಾನುವಾರ ಭೇಟಿ ನೀಡಲಿದ್ದಾರೆ. ಕಳೆದ 125 ವರ್ಷಗಳಲ್ಲಿ ಬೊರಿಮಾರ್ ಚರ್ಚ್ ವ್ಯಾಪ್ತಿಗೆ ಒಳಪಟ್ಟು ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆಸಿರುವವರ ಹೆಸರಿನಲ್ಲಿ ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ಬೊರಿಮಾರ್ ಚರ್ಚ್ ನಲ್ಲಿ ನಡೆಯುವ ವಿಶೇಷ ಬಲಿಪೂಜೆಯಲ್ಲಿ ಅವರು ಪ್ರಧಾನ ಗುರುಗಳಾಗಿ ಪೂಜೆಯನ್ನು ನೆರವೇರಿಸಲಿದ್ದಾರೆಮಂಗಳೂರು ಬಿಜೈ ಲೂಡ್ಸ್ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲರಾದ ರೆ.ಫಾ.ರೊಬರ್ಟ್ಡಿಸೋಜ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಚರ್ಚ್ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾ. ಗ್ರೆಗರಿ ಪಿರೇರಾ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ