ಜಿಲ್ಲಾ ಸುದ್ದಿ

ಮಹಮ್ಮದ್ ಆರಿಫ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ

 ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಮುಖ್ಯ ವರದಿಗಾರ, ಹಿರಿಯ ಪತ್ರಕರ್ತ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರು ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ,ವಸಂತ ಕುಮಾರ್ ಪೆರ್ಲ ಮತ್ತು ಬೆಸೆಂಟ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪುರಸ್ಕೃತ ಸುಕೇಶ್ ಕುಮಾರ್ ದತ್ತಿನಿಧಿಯಿಂದ ‘ಬ್ರಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತಿದೆ.

ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts