ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಜೂ. 23ರಂದು ಅಪರಾಹ್ನ 3.00 ಕ್ಕೆ ಜೀರ್ಣೋಧ್ಧಾರ ಸಮಿತಿ, ಆಡಳಿತ ಸಮಿತಿ ಹಾಗೂ ಮಹಿಳಾ ಸಮಿತಿಯ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.
ಕ್ಷೇತ್ರವು ಎರಡು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿದ್ದು ಈಗಾಗಲೇ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುವರೇ ಇದೀಗ ಸಮಾಲೋಚನಾ ಸಭೆಯನ್ನು ಕರೆಯಲಾಗಿದ್ದು
ಈ ಸಭೆಯಲ್ಲಿ ಸರ್ವ ಸದಸ್ಯರು ಭಾಗವಹಿಸಿ ತಮ್ಮ ಸಲಹೆ,ಸೂಚನೆಗಳನ್ನು ನೀಡಬೇಕಾಗಿ ಆಡಳಿತ ಮೊಕ್ತೇಸರ
ಅರುಣ್ ಕುಮಾರ್ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಮಡಿವಾಳಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಇಂದು ಸಮಾಲೋಚನಾ ಸಭೆ"