ವರ್ಷದಲ್ಲಿ 100 ಕೋಟಿ ರೂ ಕ್ಷೇತ್ರಕ್ಕೆ ಅನುದಾನ : ಶಾಸಕ ರಾಜೇಶ್ ನಾಯ್ಕ್

ಕಳೆದ ಒಂದು ವರ್ಷದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ 100 ಕೋಟಿಗೂ ಮಿಕ್ಕಿ ಅನುದಾನ ವಿವಿಧ ಮೂಲಗಳಿಂದ ಬಂದಿದ್ದು, ಪ್ರತಿ ಗ್ರಾಮಕ್ಕೂ ಆದ್ಯತೆ ಮೇಲೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿ ಅವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮರಣೆ ಮತ್ತು ಶಂಭೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪ್ರತಿ ಗ್ರಾಮಕ್ಕೂ ಆದ್ಯತೆ ಮೇರೆಗೆ ಎಲ್ಲಾ ಗ್ರಾಮಗಳಿಗೆ ಅನುದಾನವನ್ನು ನೀಡಿದ್ದು ಶಂಭೂರು ಗ್ರಾಮಕ್ಕೆ ಸುಮಾರು 1.55 ಕೋಟಿ ರೂ ಅನುದಾನವನ್ನು ನೀಡಿದ್ದು ಮುಂದಿನ ಅವಯಲ್ಲಿ ಇನ್ನಷ್ಟು ಅನುದಾನವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು. ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ, ಪಕ್ಷ ಪ್ರಮುಖರಾದ ರಾಮದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ಆನಂದ ಶಂಭೂರು, ರಮನಾಥ ರಾಯಿ, ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.




  

  

Be the first to comment on "ವರ್ಷದಲ್ಲಿ 100 ಕೋಟಿ ರೂ ಕ್ಷೇತ್ರಕ್ಕೆ ಅನುದಾನ : ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*